BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ -ಬಿಜಿಎ ಪದನಿಮಿತ್ತ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜಿಎ ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರದಲ್ಲಿರುವ ಬೆಂಗಳೂರು ಸಚಿವರು, ರಾಜ್ಯ ಸರ್ಕಾರದ ಬೆಂಗಳೂರು ಸಚಿವರು, ಬೆಂಗಳೂರು ಸಂಸದರು, ಶಾಸಕರು, ಎಂಎಲ್ ಎ ಗಳು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಇನ್ನು ಸದಸ್ಯರಾಗಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸ್ಥಾನ ನೀಡಲಾಗಿದೆ. ಬಿಜಿಎ ಮುಖ್ಯ ಆಯುಕ್ತರು ಪದನಿಮಿತ್ತ ಸದಸ್ಯರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬಿಜಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಆಯುಕ್ತರು, ಪದನಿಮಿತ್ತ ಸದಸ್ಯರು. ಪದ ನಿಮಿತ್ತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read