ಹಾಸನ: ಕನ್ನಡದ ಬಾವುಟದ ಬಗ್ಗೆ ಹೇಳಿಕೆ ವಿಚಾರದ ಬಗ್ಗೆ ತಮ್ಮ ವಿರುದ್ಧದ ಆರೋಪಕ್ಕೆ ಸಾಹಿತಿ ಭಾನು ಮುಷ್ತಾಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಕನ್ನಡವನ್ನು ನನ್ನಷ್ಟು ಪ್ರೀತಿಸಿ, ಕನ್ನಡವನ್ನು ನನ್ನಷ್ಟು ಬಳಕೆ ಮಾಡಿ, ಕನ್ನಡವನ್ನು ನನ್ನಷ್ಟು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನವರ ಬಾಯಲ್ಲಿ ಕನ್ನಡ ಎಂದು ಹೇಳಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಒಂದೊಂದು ಪುಟ ಓದುತ್ತಿದ್ದೇನೆ. ಅವರು ಬಾಯಿ ಬಿಟ್ಟುಕೊಂಡು ನೋಡುತ್ತಿದ್ದಾರೆ. ನನ್ನಂತೆ ನೀವು ಸಾಧನೆ ಮಾಡಿದ್ರೆ ಟೀಕೆ ಮಾಡಲು ಅರ್ಹತೆ ಸಿಗುತ್ತದೆ. ಇಲ್ಲದೆ ಹೋದರೆ ನಿಮ್ಮ ಯಾವುದೇ ಮಾತಿನಲ್ಲಿ ಸ್ಪಷ್ಟತೆ ಇರುವುದಿಲ್ಲ. ನಂಬಿದವರನ್ನು ಕನ್ನಡ ಯಾವತ್ತೂ ಕೈ ಬಿಡಲ್ಲ. ಇದಕ್ಕೆ ನಾನೇ ಸಾಕ್ಷಿ ಎಂದು ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಹೇಳಿದ್ದಾರೆ.