ಅ. 9 ರಂದು ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲು ಓಪನ್: ಈ ಬಾರಿ 13 ದಿನ ದೇವಿ ದರ್ಶನಕ್ಕೆ ಅವಕಾಶ

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ವಹಿಸುವ ಕರ್ತವ್ಯವನ್ನು ಅಚ್ಚುಕಟ್ಟಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಶ್ರೀ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಕುರಿತು ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಉದಾಸೀನ ಮಾಡದೇ ಬಹಳ ಎಚ್ಚರಿಕೆಯಿಂದ ಸಣ್ಣ ತಪ್ಪು ಕೂಡ ದೊಡ್ಡದಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.

ಹಾಸನಾಂಬ ಜಾತ್ರಾ ಮಹೋತ್ಸವ ಜಿಲ್ಲೆಯ ಗೌರವದ ಪ್ರತೀಕ. ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ದೇವಿಯ ದರ್ಶನಕ್ಕೆ ಆಗಮಿಸುವುದರಿಂದ ಪ್ರತಿಯೊಬ್ಬರು ಅತ್ಯುತ್ತಮವಾಗಿ ನಿರ್ವಹಣೆ ಮಾಡುವುದರ ಮೂಲಕ ಜಿಲ್ಲೆಗೆ ಉತ್ತಮ ಹೆಸರು ತರುವಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಾಮಾನ್ಯ ಜನರಿಗೆ ತೊಂದರೆಯಾಗದAತೆ ಗೌರವಯುತವಾಗಿ ನಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಸಹಕಾರ ಕೋರುತ್ತೇನೆ ಎಂದು ಸಚಿವರು ತಿಳಿಸಿದರು.

ಅಕ್ಟೋಬರ್ 9 ರಂದು ದೇವಾಲಯದ ಬಾಗಿಲು ತೆರೆಯಲಾಗುವುದು, 23 ರಂದು ದೇವಾಲಯದ ಬಾಗಿಲು ಮುಚ್ಚಲಾಗುವುದು. ಒಟ್ಟು 13 ದಿನಗಳ ಕಾಲ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ, ಪ್ರಸಾದ ವಿತರಣೆ, ಭಕ್ತಾದಿಗಳು ದೇವಿ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆಗೆ ಕ್ರಮವಹಿಸಬೇಕು. ಜನಸಂದಣಿ ಆಗದಂತೆ ಎಚ್ಚರಿಕೆ ವಹಿಸಿ ಶಾಂತ ರೀತಿಯಲ್ಲಿ ನಿರ್ವಹಣೆ ಮಾಡಲು ನಿಗಾವಹಿಸಬೇಕು. ದೇವಿಯ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರಿಗೆ ಜಾತ್ರಾ ಮಹೋತ್ಸವ ಮನಸ್ಸಿನಲ್ಲಿ ಉಳಿಯುವಂತೆ ಮಾಡಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜಾನಪದ ಕಲಾ ಪ್ರರ್ದಶನಕ್ಕೆ ಒತ್ತು ನೀಡುವಂತೆ ತಿಳಿಸಿದರಲ್ಲದೆ ಸ್ಥಳೀಯ ತಿಂಡಿ ತಿನಿಸ್ಸುಗಳು ಹಾಗೂ ಕರಕುಶಲ ಉತ್ಪನ್ನಗಳಿಗೆ ಮಾರಾಟ ಮಳಿಗೆಗಳನ್ನು ತೆರೆಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ, ಜಾತ್ರಾ ಮಹೋತ್ಸವದಲ್ಲಿ ಕರ್ತವ್ಯ ನಿರ್ವಹಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದೆ. ಜನಸಂದಣಿ ನಿಯಂತ್ರಣಕ್ಕೆ ಹಾಗೂ ಸುರಕ್ಷತೆಗಾಗಿ ಕ್ರಮವಹಿಸಲಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿದರು.

ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಹಾಸನ ಉಪ ವಿಭಾಗಧಿಕಾರಿ ಮಾರುತಿ ಅವರು ಜಾತ್ರಾ ಮಹೋತ್ರವಕ್ಕೆ ಕೈಗೊಂಡಿರುವ ಸಿದ್ದತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು, ಮಹಾನಗರ ಪಾಲಿಕೆ ಮೇಯರ್ ಹೇಮಾಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read