ಬೆಂಗಳೂರು: ಮದುವೆ ನಡೆಯುವಾಗ ಕಲ್ಯಾಣ ಮಂಟಪಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿಯ ಪರಮೇಶ್ ಬಂಧಿತ ಆರೋಪಿ. ಈತನಿಂದ 400 ಗ್ರಾಂ ಚಿನ್ನಾಭರಣ, 91,000 ರೂ. ನಗದು ಸೇರಿ 36.91 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಅತಿಥಿ ಸೋಗಿನಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಹೋಗುತ್ತಿದ್ದ ಆರೋಪಿ ಮಾಂಗಲ್ಯ ಧಾರಣೆ ಸಂದರ್ಭದಲ್ಲಿ ವಧು, ವರನ ಕಡೆಯವರ ರೂಂ ಗೆ ಹೋಗಿ ನಗದು, ಚಿನ್ನಾಭರಣ ದೋಚಿ ಪರಾರಿ ಆಗುತ್ತಿದ್ದ. ಕದ್ದ ಆವರಣಗಳನ್ನು ಮಾರಾಟ ಮಾಡುತ್ತಿದ್ದ. ಕಾಮಾಕ್ಷಿಪಾಳ್ಯ, ಕೆಂಗೇರಿ, ಬಸವನಗುಡಿ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಈತ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.