ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಸೈಯದ್ ನೂರ್ ಎಂಬುವರು ಸಾಕಿದ ನಾಟಿ ಕೋಳಿಯೊಂದು ಸೋಮವಾರ ನೀಲಿ ಬಣ್ಣದ ಮೊಟ್ಟೆ ಇಟ್ಟಿದೆ.
ಅದರ ಫೋಟೋವನ್ನು ಮಾಲೀಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಗ್ರಾಮಸ್ಥರು ಮೊಟ್ಟೆಯನ್ನು ನೋಡಲು ಮುಗಿಬಿದ್ದಿದ್ದಾರೆ. ಮೇದೋಜೀರಕಾಂಗದಲ್ಲಿ ಬಿಲಿವರ್ಡಿನ್ ಎಂಬ ವರ್ಣ ದ್ರವ್ಯದ ಕಾರಣ ಮೊಟ್ಟೆಗೆ ನೀಲಿ ಬಣ್ಣ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರತಿದಿನ ಬಿಳಿ ಬಣ್ಣದ ಮೊಟ್ಟೆ ಇಡುತ್ತಿದ್ದ ಕೋಳಿ ಸೋಮವಾರ ನೀಲಿ ಬಣ್ಣದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದೆ. ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಕೂಡ ಪರಿಶೀಲನೆ ನಡೆಸಿದ್ದಾರೆ. ಸುದ್ದಿ ತಿಳಿದ ಜನರು ಕೂಡ ತಂಡೋಪತಂಡವಾಗಿ ಬಂದು ಮೊಟ್ಟೆಯನ್ನು ವೀಕ್ಷಿಸಿ ಫೋಟೋ ವಿಡಿಯೋ ಮಾಡಿಕೊಂಡಿದ್ದಾರೆ.
You Might Also Like
TAGGED:ನೀಲಿ ಮೊಟ್ಟೆ