ಬೆಂಗಳೂರು: ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪರಿಷ್ಕರಿಸಿದೆ.
ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು ಆಯಾ ವ್ಯಾಪ್ತಿಯ ವಿಭಾಗೀಯ ಸಹ ನಿರ್ದೇಶಕರಿಗೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 29ರ ವರೆಗೆ ಅವಕಾಶ ನೀಡಲಾಗಿದೆ. 2024- 25 ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ವೇಳಾಪಟ್ಟಿಯ ಪ್ರಕಾರ ಹೆಚ್ಚುವರಿ ಶಿಕ್ಷಕರು ತಮ್ಮ ಆಕ್ಷೇಪಣೆಗಳನ್ನು ವಿಭಾಗೀಯ ಸಹ ನಿರ್ದೇಶಕರಿಗೆ ಸಲ್ಲಿಸಲು ಆಗಸ್ಟ್ 25ರ ವರೆಗೆ ಅವಕಾಶ ನೀಡಲಾಗಿತ್ತು. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಆಕ್ಷೇಪಣೆಗಳನ್ನು ಸಹ ನಿರ್ದೇಶಕರಿಗೆ ಸಲ್ಲಿಸಲು ಆಗಸ್ಟ್ 29 ರವರೆಗೆ ಅವಕಾಶ ನೀಡಲಾಗಿತ್ತು.

