ಬೆಂಗಳೂರು : ಬೆಂಗಳೂರಿನಲ್ಲಿ 2200 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ 5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಆ್ಯಪ್ನಲ್ಲಿ ನಾಗರೀಕರು ದೂರುಗಳನ್ನು ಸಲ್ಲಿಸುತ್ತಾರೆ. ನಗರದ ವಿವಿಧೆಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ ನಡೆಸಿದ ದೃಶ್ಯಗಳು.. ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ.
— DK Shivakumar (@DKShivakumar) August 27, 2025
ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ… pic.twitter.com/4ToDIZwSjx