ಹಾಸನ : ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಕೊಲೆಯಾದ ಆಟೋ ಚಾಲಕನನ್ನು ದೊಡ್ಡಮಂಡಿಗನಹಳ್ಳಿ ನಿವಾಸಿ ಅಂಕಿತ್ (26) ಎಂದು ಗುರುತಿಸಲಾಗಿದೆ. ಹಾಸನದ ಯರೇಹಳ್ಳಿ ಈ ಕೊಲೆ ನಡೆದಿದೆ.
ನಿನ್ನೆ ರಾತ್ರಿ ಬೈಕ್ ನಲ್ಲಿ ಅಂಕಿತ್ ರಾಗಿಮುದ್ದನಹಳ್ಳಿ ಕಡೆ ಹೋಗುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.