HomeLatest Newsಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯಿತಿ ಒಂದನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವವನ್ನು ಚುನಾವಣಾ ಆಯೋಗ ರದ್ದು ಮಾಡಿದೆ.

ಕೆ. ಮಹಮ್ಮದ್ ಇಕ್ಬಾಲ್ 2024- 25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಚುನಾವಣಾ ಆಯೋಗದ ಉಲ್ಲೇಖದ ಆದೇಶದಂತೆ ಆಸ್ತಿ ಮತ್ತು ಹೊಣೆಗಾರಿಕೆ ದಾಖಲಿಸದ ಕಾರಣ ಮಹಮ್ಮದ್ ಇಕ್ಬಾಲ್ ಅವರನ್ನು ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular