ನವದೆಹಲಿ: ದೇಶಾದ್ಯಂತ ಇಂದು ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭ ಹಾರೈಸಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಭಕ್ತಿ ಮತ್ತು ನಂಬಿಕೆಯಿಂದ ತುಂಬಿರುವ ಈ ಪವಿತ್ರ ಸಂದರ್ಭವು ಎಲ್ಲರಿಗೂ ಶುಭ ತರಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ. ಗಣೇಶನು ತನ್ನ ಎಲ್ಲಾ ಭಕ್ತರಿಗೆ ಸಂತೋಷ, ಶಾಂತಿ ಮತ್ತು ಅತ್ಯುತ್ತಮ ಆರೋಗ್ಯವನ್ನು ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

