ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸದಾಗಿ ಭರ್ತಿ ಮಾಡುವ ಸಂಬAಧವಾಗಿ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977 ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ) ರನ್ವಯ 07 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರುಗಳಿಗೆ ಅರಕಲಗೂಡು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2025 ರ ಸಂಜೆ 5.30 ಗಂಟೆ ಆಗಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾಧಿಕಾರಿ, ಕಛೇರಿ, ಹಾಸನ ಜಿಲ್ಲೆ, ಹಾಸನ. ಇಲ್ಲಿಗೆ ಕೊನೆಯ ದಿನಾಂಕದೊಳಗೆ ಸಲ್ಲಿಸಲು ತಿಳಿಸಿದೆ. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ದೂರವಾಣಿ ಸಂಖ್ಯೆ:08172-253345
ದಾಖಲಾತಿಗಳು:- ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ,ಎಲ್.ಎಲ್.ಬಿ. ಅಂಕಪಟ್ಟಿಗಳು. ವಕೀಲ ವೃತ್ತಿಯ ನೋಂದಣಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ವಕೀಲ ವೃತ್ತಿ ನಡೆಸಿದ ಅನುಭವದ ಕುರಿತು ಸಂಕ್ಷಿಪ್ತ ವಿವರಗಳು, ಅರ್ಜಿದಾರರು ಗಣಕ ಯಂತ್ರದ ಪರಿಣಿತಿ/ ಜ್ಞಾನವುಳ್ಳವರೇ, ಹೌದಾದಲ್ಲಿ ಈ ಬಗ್ಗೆ ಸಂಕ್ಷಿಪ್ತ ಮಾಹಿತಿ, (ಪ್ರಮಾಣ ಪತ್ರ). ಅರ್ಜಿದಾರರ ಭಾವಚಿತ್ರ, ಈ ದಾಖಲೆಗಳನ್ನು ಕಡ್ಡಾಯವಾಗಿ ಪತ್ರಾಂಕಿತ ಅಧಿಕಾರಿರವರಿಂದ ದೃಢೀಕರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.