ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಾದ್ಯಂತ ಅತಿಹೆಚ್ಚಿನ ಮಳೆಯಾಗುತ್ತಿದ್ದು, ನಾಳೆ ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಆ. 28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳೀಗೆ ರಜೆ ಘೋಷಣೆ ಮಾಡಲಾಗಿದೆ. ತಹಶೀಲ್ದಾರ್ ಗಳು ರಜೆ ಘೋಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ ಹಾಗೂ ಸಿದ್ದಾಪುರ, ಜೋಯಿಡಾ, ಯಲ್ಲಾಪುರ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.