HomeLatest NewsBREAKING: ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್

BREAKING: ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ದಸರಾ ಬೆಳವಣಿಗೆಯ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಸುತ್ತ ರಾಜಕೀಯ ನಡೆಯುತ್ತಿರುವುದರಿಂದ ತೀವ್ರ ಬೇಸರದಿಂದ ಇದನ್ನು ಬರೆಯುತ್ತಿದ್ದೇನೆ. ಈ ವರ್ಷದ ನಾಡಹಬ್ಬ(ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯು ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎನ್ನುವಂತಹ ಅಸಂವೇದನಾಶೀಲ ಹೇಳಿಕೆಗಳು ಅನಗತ್ಯ ಮತ್ತು ತಪ್ಪಿಸಬಹುದಾದವು. ಅದು ಹಿಂದೂ ದೇವಸ್ಥಾನವಲ್ಲದಿದ್ದರೆ ಮುಜರಾಯಿ ಅಡಿಯಲ್ಲಿ ತರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ದಸರಾ ಒಂದು ಸಾಂಸ್ಕೃತಿಕ ಆಚರಣೆ ಎಂಬುದು ನಮ್ಮ ಅಭಿಪ್ರಾಯ. ರಾಜ್ಯವು ಸ್ವಭಾವತಃ ಇಂತಹ ಉತ್ಸವ ನಡೆಸುವಲ್ಲಿ ಧಾರ್ಮಿಕ ಪವಿತ್ರ ಸಂಪ್ರದಾಯ ಅಥವಾ ಪರಂಪರೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವು ಆಯೋಜಿಸುವ ಆಚರಣೆಗಳು ಧಾರ್ಮಿಕ ಸ್ವರೂಪ ಆಗಿಲ್ಲ. ಅವು ವಿಜಯದಶಮಿ ಸೇರಿ ನವರಾತ್ರಿ ಆಚರಣೆಗಳೊಂದಿಗೆ ಹೊಂದಿಕೆಯಾಗುತ್ತವೆ. ಈ ಧಾರ್ಮಿಕ ಆಚರಣೆಗಳನ್ನು ಖಾಸಗಿಯಾಗಿ ಹಳೆಯ ಧಾರ್ಮಿಕ ಪದ್ಧತಿ ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿ ನಾವು ಆಚರಿಸುತ್ತೇವೆ. ಸರ್ಕಾರ ಕೂಡ ಸಾಂಸ್ಕೃತಿಕ ಆಚರಣೆಗಳನ್ನು ಅರಮನೆಯ ಮುಂದೆ ಆಚರಿಸುತ್ತದೆ. ಎರಡೂ ಆಚರಣೆಯಿಂದ ಗೊಂದಲ ಆಗದಿರಲಿ ಎಂದು ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ಗಣೇಶ ಚತುರ್ಥಿ ಆಚರಣೆಯು ಎಲ್ಲಾ ಅಡೆತಡೆಗಳು ತಪ್ಪು ಕಲ್ಪನೆಗಳು ಮತ್ತು ಸಂಘರ್ಷಗಳನ್ನು ನಿವಾರಿಸುತ್ತದೆ ಎಂದು ಆಶಿಸುತ್ತೇನೆ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular