ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿಯ ಅಗ್ರಹಾರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರೆ ಮೇಸ್ತ್ರಿ ಮೃತಪಟ್ಟಿದ್ದಾರೆ.
ಬಿಹಾರ ಮೂಲದ ಗಾರೆ ಮೇಸ್ತ್ರಿ ಶಕಲ್ ದಾಸ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕ ನೀರಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.