ಬೆಂಗಳೂರು : 2025-26ನೇ ಸಾಲಿನ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ಉಪಯೋಗಿಸುವ ಸಂಬಂಧ 15 ದಿನಗಳ ವಸತಿಯುತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಸಾಲಿನ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡೋನ್ ಉಪಕರಣವನ್ನು Logistics Surveillance, Agriculture ಮತ್ತು ವಿವಿಧ ಕ್ಷೇತ್ರಗಳಲ್ಲಿ ಉಪಯೋಗಿಸುವ ಸಂಬಂಧ ಉತ್ತರ (ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳು) ಹಾಗೂ ದಕ್ಷಿಣ (ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗಗಳು) ಪ್ರತ್ಯೇಕವಾಗಿ 15 ದಿನಗಳ ವಸತಿಯುತ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಉದ್ದೇಶಿಸಲಾಗಿದೆ.ಅದರಂತೆ, ತರಬೇತಿ ಅವಧಿ, ತರಬೇತಿ ವಿವರ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
ತರಬೇತಿಯ ನಿಯಮಗಳು ಮತ್ತು ಷರತ್ತುಗಳು:
* ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯು ಆಯ್ಕೆ ಮಾಡಿದ ವಿಭಾಗದ ಪ್ರಕಾರ ತರಬೇತಿ ವಿಭಾಗವನ್ನು ನಿಯೋಜಿಸಲಾಗುತ್ತದೆ.ಅಭ್ಯರ್ಥಿಯ ತರಬೇತಿ ವಿಭಾಗವನ್ನು ಬದಲಾಯಿಸುವ ಅಧಿಕಾರವನ್ನು ಇಲಾಖೆಯು ಹೊಂದಿರುತ್ತದೆ.
* ಅಭ್ಯರ್ಥಿಯು ತರಬೇತಿಯ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸಬೇಕು ಮತ್ತು ತರಬೇತಿಯ ವೇಳಾಪಟ್ಟಿಯನ್ನು ನಿರ್ವಹಿಸಬೇಕು. ತರಬೇತಿಯ ನಿಯಮಗಳನ್ನು ಪಾಲಿಸದಿದ್ದರೇ. ಅಂತಹ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಅಧಿಕಾರವನ್ನು ಇಲಾಖೆಯು ಹೊಂದಿರುತ್ತದೆ.
* ತರಬೇತಿ ಸಂಸ್ಥೆ, ಅಧ್ಯಾಪಕ ಸದಸ್ಯರು ಅಥವಾ ಬೋಧಕರ ಕಡೆಗೆ ಅವಿಧೇಯತೆ ಅಥವಾ ದುರ್ನಡತೆ ಪ್ರದರ್ಶಿಸುವ ಯಾವುದೇ ಅಭ್ಯರ್ಥಿಯನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ.
* ಅಭ್ಯರ್ಥಿಯು 15 ದಿನಗಳ ಪೂರ್ಣ ತರಬೇತಿಯನ್ನು ಪೂರ್ಣಗೊಳಿಸಬೇಕು.
* ತುರ್ತು ಸಂದರ್ಭದಲ್ಲಿ, ಅಭ್ಯರ್ಥಿಯು ತರಬೇತಿ ಸಂಸ್ಥೆ ಮತ್ತು ಇಲಾಖೆಯ ಅನುಮತಿಯೊಂದಿಗೆ ತರಬೇತಿ ಆವರಣದಿಂದ ಹೊರಗೆ ಹೋಗಬಹುದು.
* ಪರೀಕ್ಷೆಯನ್ನು ನಡೆಸಿ, ಅದರ ಫಲಿತಾಂಶದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಇಲಾಖೆಯು ಹೊಂದಿದೆ.
*ಇಲಾಖಾ ವೆಬ್-ಸೈಟ್ನಲ್ಲಿ ಕಾಲಕಾಲಕ್ಕೆ ನೀಡಲಾಗಿರುವ ಮಾಹಿತಿಯು ಅಧಿಕೃತ ಹಾಗೂ ಅಂತಿಮವಾಗಿರುತ್ತದೆ.
*ಇಲಾಖೆಯಿಂದ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗದಿರುವುದರಿಂದ, ಇಲಾಖಾ ವೆಬ್ಸೈಟನ್ನು ಕಾಲಕಾಲಕ್ಕೆ ವೀಕ್ಷಿಸತಕ್ಕದ್ದು ಹಾಗೂ ವೆಬ್ಸೈಟ್ನಲ್ಲಿ ನೀಡಲಾಗುವ ಮಾಹಿತಿಯನ್ನು ಕಡ್ಡಾಯವಾಗಿ ಅನುಸರಿಸುವುದು.
*ತಮ್ಮ ಮಾಹಿತಿಯ ಕಾರಣದಿಂದ ಉಂಟಾಗಬಹುದಾದ ಲೋಪಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಕಾರಣರಾಗಿರುತ್ತಾರೆ.


