ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಡೇಕೊಳ್ಳ ಘಾಟ್ ನಲ್ಲಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಬಳಿ ನಡೆದಿದೆ.
ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಗೋಗಟೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ.
ಗಾಯಾಳುಗಳನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.