HomeLatest Newsಫಲಾನುಭವಿ ಆಧಾರಿತ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಫಲಾನುಭವಿ ಆಧಾರಿತ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಅಥವಾ ನೇರವಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/sevasindhu/kannada ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

*ಫಲಾನುಭವಿ ಆಧಾರಿತ ಯೋಜನೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಬ್ರೆöÊಲ್ ಕಿಟ್, ಟಾಕಿಂಗ್ ಲ್ಯಾಪ್ ಟ್ಯಾಪ್ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿದ ಜೆರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಶಾಂತಿಧಾಮ ಆವರಣ, ಕಂಟೋನ್ ಮೆಂಟ್, ಬಳ್ಳಾರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು: ಬಳ್ಳಾರಿ, ಕಂಪ್ಲಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕುರುಗೋಡು-9538000887 ಅಥವಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂö್ಯ ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂö್ಯಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular