ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಕುಸಿದು ಬಿದ್ದು ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಶಿಡ್ಲಘಟ್ಟದಿಂದ ರಾಮಲಿಂಗಾಪುರಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ರಾಮಲಿಂಗಾಪುರ ನಿವಾಸಿ ಪಿಳ್ಳ ವೆಂಕಟರಮಣಪ್ಪ ಮೃತಪಟ್ಟ ಪ್ರಯಾಣಿಕ ಎಂದು ಹೇಳಲಾಗಿದೆ. ಘಟನೆ ನಡೆದ ತಕ್ಷಣವೇ ಬಸ್ ಸಮೇತ ಶಿಡ್ಲಘಟ್ಟ ನಗರಕ್ಕೆ ಚಾಲಕ ವಾಪಸ್ ಬಂದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ವೆಂಕಟರಮಣಪ್ಪ ಮೃತಪಟ್ಟಿದ್ದರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.