ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಶುಕ್ರವಾರ ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬಿದರ್ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಯಾದಗಿರಿ, ಉತ್ತರ ಕನ್ನಡ, ಗದಗ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ಜಿಲ್ಲಾಡಳಿತ ರಜೆ ನೀಡಿದೆ.
ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆಯಂತೆ ಬಿಇಒಗಳು ರಜೆ ಘೋಷಣೆ ಮಾಡಿದ್ದಾರೆ.