ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿಗೆ ಸೆ. 1ರಿಂದ ಆನ್ಲೈನ್ ನಲ್ಲಿ ಮೊದಲೇ ಬುಕಿಂಗ್ ಮಾಡಿಕೊಂಡು ಬರಲು ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿಗೆ ಬರುವ ಪ್ರವಾಸಿಗರು ಸೆಪ್ಟೆಂಬರ್ 1ರಿಂದ ಆನ್ಲೈನ್ ನಲ್ಲಿ ಮೊದಲೇ ಬುಕಿಂಗ್ ಮಾಡಿಕೊಂಡು ಬರಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದಾಗಿ ಪ್ರವಾಸಿ ತಾಣಗಳಲ್ಲಿ ದಟ್ಟಣೆ ಉಂಟಾಗುತ್ತಿದ್ದು, ನಿಯಂತ್ರಿಸಲು ಜಿಲ್ಲಾಡಳಿತದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತದ https://chikkamagaluru.nic.in.end/tourism ವೆಬ್ಸೈಟ್ ಲಿಂಕ್ ಬಳಸಿ ಬೈಕ್ ಗಳಿಗೆ 50 ರೂ., ಕಾರ್ ಗಳಿಗೆ 100 ರೂ., ತೂಫಾನ್ ವಾಹನ 150 ರೂ., ಟೆಂಪೋ ಟ್ರಾವೆಲರ್ 200 ರೂ. ಶುಲ್ಕ ಪಾವತಿಸಿ ದಿನಾಂಕ ಮತ್ತು ಸಮಯವನ್ನು ಮೊದಲೇ ಬುಕಿಂಗ್ ಮಾಡಿಕೊಳ್ಳಬೇಕಿದೆ.

ಪ್ರತಿದಿನ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಗೆವರೆಗೆ ಮೊದಲ ಅವಧಿ, ಮಧ್ಯಾಹ್ನ 1ರಿಂದ ಸಂಜೆ 6 ಗಂಟೆ ವರೆಗೆ ಎರಡನೇ ಅವಧಿ ಎಂದು ಸಮಯ ನಿಗದಿ ಮಾಡಲಾಗಿದ್ದು, ಒಂದು ಅವಧಿಗೆ 600 ವಾಹನಗಳಿಗೆ ಅವಕಾಶವಿರುತ್ತದೆ. ಮೊದಲು ಬುಕಿಂಗ್ ಮಾಡಿಕೊಂಡವರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read