BREAKING: ಕೆ.ಎಸ್.ಆರ್.ಟಿ.ಸಿ ಬಸ್- ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ಕೆ.ಆರ್.ಪೇಟೆಯ ಅಂಚೆಬೀರನಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಕಡೆಹೆಮ್ಮಿಗೆ ಗ್ರಾಮದ ಉಮೇಶ್ (24) ಹಾಗೂ ಚನ್ನರಾಯಪಟ್ಟಣದ ದಿನೇಶ್ ಮೃತ ದುರ್ದೈವಿಗಳು.

ಇಬ್ಬರೂ ಬೈಕ್ ನಲ್ಲಿ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ ಮೈಸೂರು ಕಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read