ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಬಳಿಕ ಇದೀಗ ವಿಜಯಲಕ್ಷ್ಮೀ ದರ್ಶನ್ ಬಗ್ಗೆಯೂ ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಮಾಡಿದ್ದು, ಈ ಬಗ್ಗೆ ಎಫ್ ಐ ಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನ ಬಗ್ಗೆ ಅಸಭ್ಯವಾಗಿ ಕಮೆಂಟ್ ಮಾಡಲಾಗಿದ್ದು, ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದರು.
ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್ ವಿಚಾರವಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.