ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಚಿಕ್ಕಮಗಳೂರು ಸೇರಿ ಹಲವೆಡೆ ಆಗಸ್ಟ್ 30ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಂಗನವಾಡಿ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ರಜೆ ಘೋಷಣೆ ಮಾಡಿದ್ದಾರೆ
ಚಿಕ್ಕಮಗಳೂರು
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಿಂದ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ ಹೋಬಳಿಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಹೊನ್ನಾವರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಭಾರಿ ಮಳೆ ಮುನ್ಸೂಚನೆ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಹೊನ್ನಾವರ ತಹಶೀಲ್ದಾರ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.