ಬೆಂಗಳೂರು : ನಟ ದರ್ಶನ್ ಗೆ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಮಾಡಿದ 4-5 ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅಶ್ಲೀಲ ಕಮೆಂಟ್ ಮಾಡಿದ ಖಾತೆಗಳ ವಿರುದ್ಧ ಪಿಎಸ್ ಐ ಲೋಕೇಶ್ ದೂರು ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನಿಂದ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.
ಮಾಜಿ ಸಂಸದೆ, ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿ ನಿಂದನೆ ಮಾಡಲಾಗಿದ್ದು, ದೂರು ದಾಖಲಾಗಿದೆ.ರಮ್ಯಾ ಗೆ ಅಶ್ಲೀಲ ಮೆಸೇಜ್ ಮಾಡಿದ ಹಾಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಹಾಕಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ.
ವಿಜಯಲಕ್ಷ್ಮಿ ದರ್ಶನ್ ಅವರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕುತ್ತಿದ್ದ ಕೆಲವು ಕ್ರಿಮಿ ಕೀಟಗಳ ವಿರುದ್ಧ ಇಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು, ಅದರಂತೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಜಯಲಕ್ಷ್ಮೀ ದರ್ಶನ್ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡಲಾಗಿದೆ. ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಕಿಡಿಗೇಡಿಗಳು ಹೇಗೆ ಅಸಭ್ಯ ಸಂದೇಶಗಳನ್ನು ರವಾನಿಸಿದ್ದರೋ ಅದೇ ರೀತಿ ವಿಜಯಲಕ್ಷ್ಮೀ ಅವರಿಗೂ ಅಸಭ್ಯವಾಗಿ, ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.ಮಾಜಿ ಸಂಸದೆ ರಮ್ಯಾ, ವಿಜಯಲಕ್ಷ್ಮೀ ದರ್ಶನ್ ಅಂತಾ ಅಲ್ಲ, ಯಾವುದೇ ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಕಮೆಂಟ್ ಮಾಡಿದರೆ, ಅವಹೇಳನ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವಹೇಳನ ಮಾಡಿದರೆ ಜೈಲುಶಿಕ್ಷೆ ಜೊತೆಗೆ ದಂಡವನ್ನೂ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.