ಕೊಪ್ಪಳ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿದ ಆರೋಪದಲ್ಲಿ ಆಹಾರ ಇಲಾಖೆಯ ಡಿಡಿ ಹುದ್ದೆಯಿಂದ ಸೋಮಶೇಖರ್ ಅವರನ್ನು ಬಿಡುಗಡೆಗೊಳಿಸಿ ಸರ್ಕಾರ ಅದೇಶ ಹೊರಡಿಸಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಹುದ್ದೆಯಿಂದ ಸೋಮಶೇಖರ್ ಅವರನ್ನು ಬಿಡುಗಡೆಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಕೆ.ನರಸಿಂಹ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗೋದಾಮಿನಲ್ಲಿದ್ದ ಅನ್ನಭಾಗ್ಯ ಅಕ್ಕಿಯನ್ನು ಆಗಸ್ಟ್ 25ರಂದು ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿದ್ದರು. ಲಾಲ್ ಎನ್ನುವ ಬ್ರ್ಯಾಂಡ್ ಮೂಲಕ ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ಸಾಗಿಸಲಾಗಿತ್ತು. ಪ್ರಕರಣ ಸಂಬಂಧ ಗೋದಾಮಿನ ಕಿರಿಯ ವ್ಯವಸ್ಥಾಪಕ ಸೋಮಶೇಖರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು. ಈ ಸಂಬಂಧ ಗಂಗಾವತಿ ಠಾಣೆಯಲ್ಲಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಅಕ್ರಮದಲ್ಲಿ ಡಿಡಿ ಸೋಮಶೇಖರ್ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.