ಕಲಬುರಗಿ : ವಾಟ್ಸಾಪ್ ನಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆಅವಹೇಳನಕಾರಿ ಸ್ಟೇಟಸ್ ಹಾಕಿದ ಪಿಡಿಒ (PDO) ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಲಬುರಗಿಯ ಆಳಂದ ತಾಲೂಕಿನ ಸುಂಟನೂರು ಗ್ರಾಮ ಪಂಚಾಯತ್ ಪಿಡಿಒ ಪ್ರವೀಣ್ ಕುಮಾರ್
ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸಿದ್ದರಾಮಯ್ಯರ ಹೆಸರನ್ನು ಸಿದ್ದಾಮುಲ್ಲಾಖಾನ್ ಎಂದು ಮರುನಾಮಕರಣ ಮಾಡಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದರು. ಸುಂಟನೂರು ಗ್ರಾಮದ ಮಲ್ಲಿಕಾರ್ಜುನ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.