ಯಾದಗಿರಿ : ಯಾದಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯನ್ನು ಗರ್ಭಿಣಿ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆರೋಪಿ ಪರಮಣ್ಣ (30 ) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆರೋಪಿ ಪರಮಣ್ಣ ಬಾಲಕಿ ಜೊತೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿ ಮಾಡಿದ್ದನು.
ಘಟನೆ ಹಿನ್ನೆಲೆ
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯ ಶೌಚಾಲಯದಲ್ಲೇ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆಯಾಗಿತ್ತು. ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯ ಶೌಚಾಲಯದಲ್ಲಿ ಈ ಘಟನೆ ನಡೆದಿದೆ.. ಬಾಲಕಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು . ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ ಆಗಿದೆ . ಬಾಲಕಿಗೆ ಶೌಚಾಲಯದಲ್ಲೇ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣದಲ್ಲಿಆರೋಪಿಯ ಬಂಧನವಾಗಿದೆ.