ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ – ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನವಾಗಿ 31 ಸಾವಿರ ರೂ. ದ್ವಿತೀಯ ಬಹುಮಾನ 21 ಸಾವಿರ ರೂ. ಮತ್ತು ತೃತೀಯ ಬಹುಮಾನ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ 3 ಸಾವಿರ ರೂ. ದ್ವಿತೀಯ ಬಹುಮಾನ 2 ಸಾವಿರ ರೂ ಮತ್ತು ತೃತೀಯ ಬಹುಮಾನ 1 ಸಾವಿರ ರೂ. ಬಹುಮಾನ ಇರಲಿದೆ.