‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಅರ್ಹ ಸಾಧಕರು, ಸಂಘ, ಸಂಸ್ಥೆಗಳ ಆಯ್ಕೆ ಮಾಡಲು ನಾಮನಿರ್ದೇಶನ ಆಹ್ವಾನ

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕʼ- 2025ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60ರ ವಯಸ್ಸಿನ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮ ಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.

ಅರ್ಜಿಗಳನ್ನು 2025, ಸೆಪ್ಟೆಂಬರ್ 19ರ ಸಂಜೆ 5.30 ರೊಳಗಾಗಿ  ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : informationdiprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read