ಬೀದರ್: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಕಾಅಮುಕ ಶಿಕ್ಷಕನನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.
ಹುಮನಾಬಾದ್ ತಾಲೂಕಿನ ಅನುದಾನ ಸಹಿತ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದ. ವಿಷಯ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ. ಇದರಿಂದ ಹೆದರಿದ್ದ ಬಾಲಕಿ ಶಾಲೆಗೆ ಹೋಗಲು ನಿರಾಕರಿಸಿದ್ದಳು.
ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಂತೆ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಶಿಕ್ಷಕನ ಕಿರುಕುಳ, ಬೆದರಿಕೆ ಬಗ್ಗೆ ಹೇಳಿದ್ದಾಳೆ. ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರಿಗೆ ಈ ಬಗ್ಗೆ ಪೋಷಕರು ದೂರು ನೀಡದರೂ ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಂತಿಮವಾಗಿ ಬಾಲಕಿಯ ತಂದೆ ಹುಮನಾಬಾದ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.