HomeLatest Newsವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ

ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ

ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ, ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕರಾಗಿರುವ ಮಹಮ್ಮದ್ ಅಜರುದ್ದೀನ್ ಅವರನ್ನು ತೆಲಂಗಾಣ ಸರ್ಕಾರ ಶನಿವಾರ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ನಿರ್ಧರಿಸಿದೆ.

ಮಹಮ್ಮದ್ ಅಜರುದ್ದೀನ್ ಮತ್ತು ನಿವೃತ್ತ ಪ್ರಾಧ್ಯಾಪಕ ಎಂ. ಕೋದಂಡರಾಮ್ ಅವರನ್ನು ರಾಜ್ಯಪಾಲರ ಕೋಟಾದ ಅಡಿಯಲ್ಲಿ ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ನಿರ್ಧರಿಸಲಾಗಿದೆ. 2009ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಜರುದ್ದೀನ್ ಅವರು ಸಂಸದರಾಗಿದ್ದರು. ಇದೀಗ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಲು ನಿರ್ಧರಿಸಲಾಗಿದೆ.

ತೆಲಂಗಾಣ ಸಚಿವ ಸಂಪುಟವು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರನ್ನು ಸರ್ಕಾರದ ಕೋಟಾದಡಿಯಲ್ಲಿ ಎಂಎಲ್‌ಸಿಯಾಗಿ ನಾಮನಿರ್ದೇಶನ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಜುಬಿಲಿ ಹಿಲ್ಸ್ ಕ್ಷೇತ್ರದಲ್ಲಿ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಜರುದ್ದೀನ್ ಅವರು ಈಗ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular