HomeLatest Newsಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಜನರೇಟರ್ ಸ್ಫೋಟ: ಯುವಕ ಗಂಭೀರ

ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಜನರೇಟರ್ ಸ್ಫೋಟ: ಯುವಕ ಗಂಭೀರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಲೋಕೇಶ್ ಗಾಯಗೊಂಡ ಯುವಕ. ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಮಾಸ್ತಿಕಂಬ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಯುವಕ ಚಿಕಿತ್ಸೆ ಬಳಿಕ ಯುವಕ ಲೋಕೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular