HomeLatest NewsBIG NEWS : ಕೇಂದ್ರ ಸರ್ಕಾರ 'GST' ಸ್ಲ್ಯಾಬ್ ಕಡಿತ ಮಾಡಿದರೆ ಕರ್ನಾಟಕಕ್ಕೆ ಪ್ರತಿ ವರ್ಷ...

BIG NEWS : ಕೇಂದ್ರ ಸರ್ಕಾರ ‘GST’ ಸ್ಲ್ಯಾಬ್ ಕಡಿತ ಮಾಡಿದರೆ ಕರ್ನಾಟಕಕ್ಕೆ ಪ್ರತಿ ವರ್ಷ 15,000 ಕೋಟಿ ನಷ್ಟ : CM ಸಿದ್ದರಾಮಯ್ಯ


ಬೆಂಗಳೂರು : ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ, ಆದರೆ ಹಣಕಾಸಿನ(Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.
ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ, ಆದರೆ ಹಣಕಾಸಿನ(Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗುವುದು ದೊಡ್ಡ ಮೊತ್ತ. 2017 ರಲ್ಲಿ ಜಿಎಸ್ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು 12% ತೆರಿಗೆ ಬೆಳವಣಿಗೆಯಾಗಿದೆ.

ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಲಿದ್ದಾರೆ. ಜಿಎಸ್ಟಿ ವಿಚಾರವಾಗಿ ರಾಜ್ಯದ ಬಿಜೆಪಿಯ ಸಂಸದರು ಎಂದಿಗೂ ಕೇಂದ್ರವನ್ನು ಒತ್ತಾಯಿಸುವುದಿಲ್ಲ. ಕರ್ನಾಟಕಕ್ಕೆ ₹11,950 ಕೋಟಿಗಳು ನಷ್ಟವಾಯಿತು. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಿಯೇ ಇಲ್ಲ. ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದ್ದಾರೆ. ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಯಾವಾಗ ಮಾತನಾಡಿದ್ದಾರೆ? ಧರ್ಮಸ್ಥಳದ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಆಸ್ತಿ ನೋಂದಣಿ ಶುಲ್ಕ ಹೆಚ್ಚಳವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಸಮಾನವಾಗಿ ಶೇಕಡಾ ಒಂದರಷ್ಟನ್ನು ಹೆಚ್ಚಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular