ಬಾಗಲಕೋಟೆ: ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನನ್ನು ಕೂಡ ಅಮಾನತು ಮಾಡಿ ಬಾಗಲಕೋಟೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅಂದಾನಯ್ಯ ವಸ್ತ್ರದ ಅವರನ್ನು ಡಿಡಿಪಿಐ ಅಮಾನತು ಮಾಡಿದ್ದಾರೆ. ಅವರು ಇಳಕಲ್ ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕರಾಗಿದ್ದಾರೆ. ತಿಂಗಳ ಹಿಂದೆ ಶಿಕ್ಷಕಿ ಅಮೀನಾ ಚಪ್ಪಲಿಯಿಂದ ಹೊಡೆದಿದ್ದರು. ಇಳಕಲ್ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಅಂದಾನಯ್ಯ ದೂರು ದಾಖಲಿಸಿದ್ದರು.
ಅಂದಾನಯ್ಯ ವಿರುದ್ಧ ಶಿಕ್ಷಕಿ ಅಮೀನಾ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಇಲಾಖೆ ತನಿಖೆ ನಡೆಸಿ ಶಿಕ್ಷಕಿ ಅಮೀನಾ ಅವರನ್ನು ಅಮಾನತು ಮಾಡಲಾಗಿತ್ತು. ಒಂದು ತಿಂಗಳ ನಂತರ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನನ್ನು ಕೂಡ ಅಮಾನತು ಮಾಡಲಾಗಿದೆ.