ಧರ್ಮಸ್ಥಳ ಸೌಜನ್ಯ ಕೇಸ್ ಸುಪ್ರೀಂ ಕೋರ್ಟ್ ಗೆ ಹೋದ್ರೆ ಖರ್ಚು ಭರಿಸುವ ಭರವಸೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಮಂಗಳೂರು: ಸೌಜನ್ಯ ಕೇಸ್ ಸುಪ್ರೀಂ ಕೋರ್ಟ್ ಗೆ ಹೋದ್ರೆ ಅದರ ಖರ್ಚು ಭರಿಸುವ ಭರವಸೆ ನೀಡಿದ್ದೇನೆ ಎಂದು ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸೌಜನ್ಯ ಕುಟುಂಬದವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಸೌಜನ್ಯ ಕುಟುಂಬದ ಜೊತೆಗೆ ನಾವಿದ್ದೇವೆ. ಸೌಜನ್ಯ ತಾಯಿ ಇವತ್ತಿಗೂ ನೋವಿನಿಂದ ಹೊರಬಂದಿಲ್ಲ ಎಂದು ಧರ್ಮಸ್ಥಳದ ಪಾಂಗಳ ಸಮೀಪ ಇರುವ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿ ಅವರ ತಾಯಿಯೊಂದಿಗೆ ಮಾತನಾಡಿದ ವಿಜಯೇಂದ್ರ ಹೇಳಿದ್ದಾರೆ.

ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಪತ್ತೆಯಾಗದಿರುವುದು ಬಹುದೊಡ್ಡ ವಿಪರ್ಯಾಸ. ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು.

ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ಎಂಬ ಅಭಯ ನೀಡಲಾಯಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read