BREAKING: ಬೆಂಗಳೂರಲ್ಲಿ ಭಾರೀ ಮಳೆಯಿಂದ ಘೋರ ದುರಂತ: ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಯಲಹಂಕ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಎಂಬೆಸ್ಸಿ ಸಂಸ್ಥೆಯ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಾರ್ಮಿಕರು ಅಡಿಪಾಯಕ್ಕೆ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಧಾರಾಕಾರ ಮಳೆಯಾಗಿದ್ದರಿಂದ ಗುಂಡಿಯಲ್ಲಿ ನೀರು ತುಂಬಿಕೊಂಡು ಮಣ್ಣು ಸಡಿಲವಾಗಿ ಕುಸಿದು ಬಿದ್ದಿದೆ. ಕೆಲಸ ಮಾಡುತ್ತಿದ್ದ ಕಾರ್ಮಿಕರು ಮೇಲೆ ಬಂದು ಪಾರಾಗಿದ್ದಾರೆ. ಆದರೆ, ಆಂಧ್ರಪ್ರದೇಶದ ಕಾರ್ಮಿಕ ಸೇರಿ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆ.

ಇತರೆ ಕಾರ್ಮಿಕರು ಸ್ಥಳೀಯರ ನೆರವಿನಿಂದ ಮಣ್ಣು ತೆರವುಗೊಳಿಸಲು ಯತ್ನಿಸಿದ್ದಾರೆ. ಈ ವೇಳೆಗೆ ಆಂಧ್ರಪ್ರದೇಶದ  ಕಾರ್ಮಿಕ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read