ಬೆಂಗಳೂರು: M.Sc Nursing, PGAHS, M-Pharma, Pharma-D, MPT ಸೇರಿದಂತೆ ಇತರ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರವೇಶ ಪರೀಕ್ಷೆ ನಡೆಸಲಿದ್ದು ಸೆ.3ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸೆ.14ರವರೆಗೆ ಅರ್ಜಿ ಸಲ್ಲಿಸಬಹುದು. ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea ಮೂಲಕ ನೋಂದಾಯಿಸಿ, ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕರ್ನಾಟಕ ಸಂಜಾತರಾಗಿದ್ದು, ಆಯಾ ಕೋರ್ಸುಗಳಲ್ಲಿ ಪದವಿ ಪಡೆದು ಅರ್ಹರಿದ್ದಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯಾ ಕೋರ್ಸುಗಳಿಗೆ ವಿವಿಧ ಇಲಾಖೆಯವರು ನಿಗದಿಪಡಿಸಿರುವ ಅರ್ಹತಾ ವಿವರಗಳನ್ನು ಹಾಗೂ ಅಗತ್ಯ ಇರುವ ದಾಖಲೆಗಳು ಇತರೆ ಮಾಹಿತಿಯನ್ನು ಒಳಗೊಂಡ ಮಾಹಿತಿ ಪುಸ್ತಕವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಈ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು. ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.