ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ ಒಂದು ದಿನ ಮೊದಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಆನ್ಲೈನ್ ನಲ್ಲಿ ನನಗೆ ಯಾರೇ ಬೈದರೂ ರಿಯಾಕ್ಟ್ ಮಾಡಬೇಡಿ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ ನಲ್ಲಿ ನಡೆದ 52ನೇ ವರ್ಷದ ಹುಟ್ಟುಹಬ್ಬದ ಸಮಾರಂಭದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳೊಂದಿಗೆ ಬರ್ತಡೇ ಆಚರಿಸಿಕೊಂಡು ಸಂಭ್ರಮಿಸಿದ್ದಾರೆ.
ಯಾವ ಕಲಾವಿದರಿಗೂ ಅವಮಾನ ಮಾಡಿ ಮಾಡಬೇಡಿ. ಆನ್ಲೈನ್ ನಲ್ಲಿ ನನಗೆ ಯಾರೇ ಬೈದರೂ ರಿಯಾಕ್ಟ್ ಮಾಡಬೇಡಿ ಎಂದು ಸುದೀಪ್ ಹೇಳಿದ್ದಾರೆ. ಸುದೀಪ್ ಹುಟ್ಟುಹಬ್ಬದ ಅಂಗವಾಗಿ ‘ಮಾರ್ಕ್’ ಚಿತ್ರದ ಟೈಟಲ್ ಬಿಡುಗಡೆ ಮಾಡಲಾಗಿದೆ. ‘ಬಿಗ್ ಬಾಸ್’ ಸೀಸನ್ 12ರ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ.
ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭ ಕೋರಿದ್ದಾರೆ. ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ವಿವಿಧ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.