ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್) ದೇಶದ 28 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಕೇಲ್-ಐ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಅಧಿಸೂಚನೆ ಪ್ರಕಟಿಸಿದೆ.
ಸೆಪ್ಟೆಂಬರ್ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ವರ್ಷದ ನವೆಂಬರ್, ಡಿಸೆಂಬರ್ ಅಥವಾ ಮುಂದಿನ ವರ್ಷದ ಜನವರಿ ಒಳಗೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಪೂರ್ಣಗೊಳಿಸಿ ಫೆಬ್ರವರಿಯಲ್ಲಿ ಸಂದರ್ಶನ ನಡೆಸಲು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಿರ್ಧಾರ ಕೈಗೊಂಡಿದೆ.
ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜೊತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಕೇಲ್ ಐ ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲಿಯೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಶಿವಮೊಗ್ಗ, ಮಂಗಳೂರು, ಮೈಸೂರು, ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. 13,217 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯದಲ್ಲಿ ಎರಡು ಗ್ರಾಮೀಣ ಬ್ಯಾಂಕ್ ಗಳು ವಿಲೀನವಾಗಿದ್ದು, ಈಗ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂದಾಗಿದೆ. ಇದರ ಪ್ರಧಾನ ಕಚೇರಿ ಬಳ್ಳಾರಿಯಲಿದ್ದು, ಈ ಬ್ಯಾಂಕಿನಲ್ಲಿ 1425 ಹುದ್ದೆಗಳು ಖಾಲಿ ಇವೆ. ಆಫೀಸ್ ಅಸಿಸ್ಟೆಂಟ್ 800 ಹುದ್ದೆಗಳು, ಆಫೀಸರ್ ಸ್ಕೇಲ್ ಐ 500 ಹುದ್ದೆಗಳು ಖಾಲಿ ಇವೆ.