HomeLatest NewsBREAKING : ಬೆಂಗಳೂರಲ್ಲಿ ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ, ಆರೋಪಿ ಪತಿ...

BREAKING : ಬೆಂಗಳೂರಲ್ಲಿ ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ, ಆರೋಪಿ ಪತಿ ಅರೆಸ್ಟ್.!

ಬೆಂಗಳೂರು : ಅನೈತಿಕ ಸಂಬಂಧ , ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಪ್ರಕರಣದ ಸಂಬಂದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು 28 ವರ್ಷದ ಪೂಜಶ್ರೀ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಮೂರು ವರ್ಷಗಳ ಹಿಂದೆ ಮನೆಯವರೇ ನೋಡಿ ನಂದೀಶ್ ಜೊತೆ ಪೂಜಶ್ರೀ ವಿವಾಹ ಮಾಡಿದ್ದರು. ದಂಪತಿಗೆ ಓರ್ವ ಮಗಳಿದ್ದಾಳೆ. ದಂಪತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ನಂದೀಶ್ ಪರಸ್ತ್ರೀ ಸಹವಾಸ ಮಾಡಿ ಅಕ್ರಮ ಸಂಬಂಧ ಹೊಂದಿದ್ದ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಪೂಜಶ್ರೀ ಹಿಂಸಿಸುತ್ತಿದ್ದ. ಅಲ್ಲದೇ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ಎರಡು ಮೂರು ಬಾರಿ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ಆಗಿದೆ. ಮತ್ತೆ ಸಮಸ್ಯೆ ಮಾಡಲ್ಲ ಎಂದು ನಂದೀಶ್ ಭರವಸೆ ಕೊಟ್ಟಿದ್ದ. ಆದರೆ ನಂದೀಶ್ ವರದಕ್ಷಿಣೆ ತರುವಂತೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ತವರಿಗೆ ಬಂದಿದ್ದ ಪತ್ನಿಯನ್ನು ಪ್ಲಾನ್ ಮಾಡಿ ಕಥೆ ಕಟ್ಟಿ ಮತ್ತೆ ಮನೆಗೆ ಕರೆದೊಯ್ದಿದ್ದಾನೆ. ಆದರೆ ಈಗ ಪೂಜಶ್ರೀ ನೇಣಿಗೆ ಕೊರಳೊಡ್ಡಿದ್ದಾಳೆ.ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ನಂದೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular