ಬೆಂಗಳೂರು: ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.
ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆ ವಿಚಾರವಾಗಿ, ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ
— DK Shivakumar (@DKShivakumar) September 2, 2025
ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಇಂದಿನಿಂದ (ಸೆ.1) ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಯಾವ, ಯಾವ… pic.twitter.com/ohMdFf3c2J