ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಲೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಎರಡು ಮೂರು ದಿನಗಳಿಂದ ಹೆಚ್ಚುತ್ತಿದೆ. ಗನೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವಕನೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.
ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಮೃತ ದುರ್ದೈವಿ. ರಾತ್ರಿ ಬೆಳಗಾಗುವವರೆಗೂ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ್ದ ಅಭಿಷೇಕ್ ಇಂದು ಬೆಳಗಿನಜಾವ ಮಾರ್ಗ ಮಧ್ಯೆ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ರಾಯಚೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.