ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.
ಹೌದು., ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 57 ನೇ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅವರ ಅರ್ಜಿಯನ್ನ ವಜಾಗೊಳಿಸಿ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಂತರ ರಾಜ್ಯ ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿತ್ತು. ನಂತರ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ ಆರೋಪಿಗಳಿಗೆ ಮತ್ತೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು. ಅಂತೆಯೇ ಪೊಲೀಸರು ನಟ ದರ್ಶನ್ ಸೇರಿ 7 ಮಂದಿ ಆರೋಪಿಗಳನ್ನು ಮತ್ತೆ ಬಂಧಿಸಿ ಜೈಲಿಗಟ್ಟಿದ್ದರು.
You Might Also Like
TAGGED:ರೇಣುಕಾಸ್ವಾಮಿ