ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಎಂಟ್ರಿ ಕೊಟ್ಟಿದೆ. ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್ ಆರೋಪ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಪರಿಶೀಲನೆಗೆ ಇಡಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.
ಧರ್ಮಸ್ಥಳ ಕೇಸ್ ಗೆ ವಿದೇಶಗಳಿಂದ ಫಂಡಿಂಗ್ ಆಗಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಎನ್ ಜಿಒಗಳಿಂದ ಫಂಡಿಂಗ್ ಆಗಿದೆಯಾ? ಎಂಬ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಒಡನಾಡಿ, ಸಂವಾದ ಸಂಸ್ಥೆಗಳ ಕಳೆದ 5 ವರ್ಷಗಳ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸುವಂತೆ ಬ್ಯಾಂಕ್ ಗಳಿಗೆ ಇಡಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.
ವಿದೇಶದಿಂದ ಬ್ಯಾಂಕ್ ಖಾತೆಗಳಿಗೆ ಹಣ ಬಂದಿರುವ ಕುರಿತು ಮಾಹಿತಿ ನೀಡುವಂತೆ, ಅದಕ್ಕೆ ಸಂಬಂಧಿಸಿದ ಪ್ರತಿಗಳನ್ನು ನೀಡುವಂತೆ ಇಡಿ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.