ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಓರ್ವ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಯಲಹಂಕದ ಕೋಗಿಲು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಓರ್ವ ಮೃತಪಟ್ಟು,ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.