BREAKING: ಚಿಕ್ಕಮ್ಮನ ಮೇಲೆಯೇ ಅತ್ಯಾಚಾರವೆಸಗಿದ ಕಾನ್ಸ್ ಟೇಬಲ್ ಹಾಗೂ ಸಹೋದರ!

ಯಾದಗಿರಿ: ರಾಜ್ಯದಲ್ಲಿ ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾನ್ಸ್ ಟೇಬಲ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಇಬ್ಬರೂ ಚಿಕ್ಕಮ್ಮನ ಮೇಲೆಯೇ ನಿರಂತರ ಅತ್ಯಾಚಾರವೆಸಗಿರುವ ಘೋರ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಾದಗಿರಿ ಸಂಚಾರಿ ಠಾಣೆ ಕಾನ್ಸ್ ಟೇಬಲ್ ರಮೇಶ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಲಕ್ಷ್ಮಣ್ ಇಬ್ಬರೂ ತಮ್ಮ ಚಿಕ್ಕಪ್ಪನ ಪತ್ನಿ ಚಿಕ್ಕಮ್ಮನ ಮೇಲೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಯಾದಗಿರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 7 ವರ್ಷಗಳಿಂದ ಜೀವಬೆದರಿಕೆ ಹಾಕಿ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read