HomeLatest Newsವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಸಿಎಂಗೆ ಹಿರಿಯ ನಟಿಯರ ಮನವಿ

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಸಿಎಂಗೆ ಹಿರಿಯ ನಟಿಯರ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ನಟ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.

ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದ್ದಾರೆ. ಮನವಿ ಸ್ವೀರಿಸಿದ ಸಿಎಂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular