HomeLatest NewsBREAKING: ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್ ಗೆ ಯುವಕ ಬಲಿ

BREAKING: ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್ ಗೆ ಯುವಕ ಬಲಿ

ವಿಜಯಪುರ: ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ್ದಾನೆ. ವಿಜಯಪುರ ನಗರದ ಟಾಂಗಾ ಸ್ಟ್ಯಾಂಡ್ ಬಳಿ ಘಟನೆ ನಡೆದಿದೆ.

ವಿಜಯಪುರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ(21) ಮೃತಪಟ್ಟ ಯುವಕ. ನಗರದಲ್ಲಿ ಏಳನೇ ದಿನದ ನೂರಾರು ಗಣೇಶನ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಮೂರ್ತಿಗಳು ಸಾಗಲು ಕೋಲಿನಿಂದ ಶುಭಂ ವಿದ್ಯುತ್ ತಂತಿಯನ್ನು ಮೇಲೆತ್ತಿದ್ದ. ಕೋಲಿನಿಂದ ವಿದ್ಯುತ್ ತಂತಿ ಎತ್ತುವ ವೇಳೆಯಲ್ಲಿ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ.

ಸ್ಥಳದಲ್ಲೇ ಡಿವೈಎಸ್ಪಿ ಬಸವರಾಜ ಯಲಿಗಾರ, ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ. ವಿಜಯಪುರ ನಗರದ ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular