HomeLatest Newsಸಕಾರಣವಿಲ್ಲದೆ ಸುಖಾಸುಮ್ಮನೆ ಡಿಎನ್ಎ ಪರೀಕ್ಷೆ ಬೇಡ, ವಿವಾಹ ಪಾವಿತ್ರ್ಯತೆಗೆ ಧಕ್ಕೆ: ಹೈಕೋರ್ಟ್ ಮಹತ್ವದ ತೀರ್ಪು

ಸಕಾರಣವಿಲ್ಲದೆ ಸುಖಾಸುಮ್ಮನೆ ಡಿಎನ್ಎ ಪರೀಕ್ಷೆ ಬೇಡ, ವಿವಾಹ ಪಾವಿತ್ರ್ಯತೆಗೆ ಧಕ್ಕೆ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅಗತ್ಯ ಮತ್ತು ಸಕಾರಣವಿಲ್ಲದೆ ಮಗುವಿನ ಪಿತೃತ್ವ ನಿರ್ಧರಿಸಲು ಡಿಎನ್ಎ ಪರೀಕ್ಷೆಗೆ ಒತ್ತಾಯಿಸುವುದು ವಿವಾಹದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಆಸ್ತಿ ಪಾಲುದಾರಿಕೆಯ ಪ್ರಕರಣವೊಂದರಲ್ಲಿ ಶಿವಮೊಗ್ಗದ 39 ವರ್ಷದ ವ್ಯಕ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಮಗುವಿನ ತಂದೆ ತಾನೇ ಎಂಬುದು ಗೊತ್ತಿದ್ದರೂ ಕೆಲವೊಮ್ಮೆ ಪುರುಷ ನಿರಾಧಾರ ಆರೋಪ ಹೊರಿಸಿಬಿಡುತ್ತಾನೆ. ಮಹಿಳೆಯ ವ್ಯಕ್ತಿತ್ವವನ್ನು ನಾಶ ಮಾಡುತ್ತಾನೆ. ಈ ಹುಮ್ಮಸ್ಸಿನಲ್ಲಿ ಡಿಎನ್ಎ ಪರೀಕ್ಷೆಗೆ ಕೋರುತ್ತಾನೆ. ಆಗ ಮಹಿಳೆಯ ಘನತೆಗೆ ಪೆಟ್ಟು ಬಿದ್ದಂತಾಗುತ್ತದೆ ಎಂದು ಹೇಳಿದ್ದಾರೆ.

ಸಕಾರಣ ಮತ್ತು ಅಗತ್ಯವಿಲ್ಲದೆ ಡಿಎನ್ಎ ಪರೀಕ್ಷೆಗೆ ಒತ್ತಾಯಿಸುವುದು ವಿವಾಹದ ಪಾವಿತ್ರ್ಯ, ಸಾಂವಿಧಾನಿಕ ಚೌಕಟ್ಟುಗಳ ಅಡಿಯಲ್ಲಿ ದಂಪತಿಗೆ ಕೊಡ ಮಾಡಿದ ಗೌಪ್ಯತೆ ಮತ್ತು ಘನತೆಯ ಮೂಲಭೂತ ಹಕ್ಕು ಉಲ್ಲಂಘಿಸಿದಂತೆ ಎಂದು ನ್ಯಾಯಪೀಠ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಿಟ್ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದೆ. ಡಿಎನ್ಎ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸುವ ಅರ್ಜಿಗಳಿಗೆ ಉತ್ತರಿಸುವಾಗ ವಿಚಾರಣಾ ನ್ಯಾಯಾಲಯಗಳು ಈ ತೀರ್ಪಿನ ಸಮಯದಲ್ಲಿ ಮಾಡಲಾಗಿರುವ ಎಲ್ಲಾ ಅವಲೋಕನ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಮುಂದುವರೆಯಬೇಕು. ಈ ತೀರ್ಪನ್ನು ಸಂಬಂಧಿಸಿದ ನ್ಯಾಯಾಲಯಗಳಿಗೆ ರವಾನಿಸಬೇಕು ಎಂದು ಹೈಕೋರ್ಟ್ ರಿಜಿಸ್ಟ್ರಿಗೆ ನ್ಯಾಯಪೀಠ ಸೂಚಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular