HomeLatest NewsBREAKING : ಭೀಮಾತೀರದಲ್ಲಿ ಹರಿದ ನೆತ್ತರು : ಕಾರದಪುಡಿ ಎರಚಿ ಗುಂಡಿಕ್ಕಿ ರೌಡಿಶೀಟರ್ ಬರ್ಬರ...

BREAKING : ಭೀಮಾತೀರದಲ್ಲಿ ಹರಿದ ನೆತ್ತರು : ಕಾರದಪುಡಿ ಎರಚಿ ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ.!

ವಿಜಯಪುರ; ವಿಜಯಪುರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಭೀಮನಗೌಡಗೆ 3 ಸುತ್ತು ಗುಂಡು ಹಾರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular